Karnataka SSLC Results 2026 Live: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ, ವಿದ್ಯಾರ್ಥಿಗಳ ಎದೆಯಲ್ಲಿ ಢವಢವ.

Karnataka SSLC Results 2026 Live: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ, ವಿದ್ಯಾರ್ಥಿಗಳ ಎದೆಯಲ್ಲಿ ಢವಢವ.

Karnataka SSLC Results: karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿರುವುದಾಗಿ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಈ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು.

Karnataka SSLC Results 2026 Live

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದಿದ್ದು, ಅಂಕಗಳ ಕ್ರೋಡೀಕರಣ ಮತ್ತು ತಾಂತ್ರಿಕ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಮೂಲಗಳ ಪ್ರಕಾರ, ನಾಳೆ ಬೆಳಿಗ್ಗೆ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಬೆಳಗ್ಗೆ 12ಗಂಟೆಗೆ ಶಿಕ್ಷಣ ಸಚಿವರು ಅಧಿಕೃತವಾಗಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

Sslc ಫಲಿತಾಂಶ ನೋಡುವ ಲಿಂಕ್

karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 ಅನ್ನು ಡಿಜಿಲಾಕರ್ ಮೂಲಕವೂ ಲಭ್ಯವಾಗಲಿದೆ. ಈ ವರ್ಷದಿಂದ, ಅಂತಿಮ ಅಂಕಗಳಿಗೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಇನ್ನು 9,02,889 ವಿದ್ಯಾರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆಈ ಬಾರಿ ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 8,12,855 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುತ್ತಿದ್ದರೆ, 62,845 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 27,189 ಖಾಸಗಿ ವಿದ್ಯಾರ್ಥಿಗಳು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ನಿಮ್ಮ ನ್ಯೂಸ್‌  ಲೈವ್‌ ಬ್ಲಾಗ್‌ನಲ್ಲಿ.

 

Leave a Comment